My wife Smt. Kanchan Ponnanna participated as chief guest and wished good luck in the closing ceremony of the hockey tournament organized by Kodava Students Association, Mysore, 05/05/2025
ಕೊಡವ ವಿದ್ಯಾರ್ಥಿ ಸಂಘ,ಮೈಸೂರು ಇವರ ವತಿಯಿಂದ ಆಯೋಜನೆಗೊಂಡಿದ್ದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.

Address at 2025 Rural Sports Meet in Gonikoppal, 04/05/2025
ಗೋಣಿಕೊಪ್ಪಲುವಿನ ಪ್ರಾಥಮಿಕ ಶಾಲಾ ಮೈದಾನದಲ್ಲಿ, ಸಹಕಾರ ಸಂಘಗಳ ನೌಕರರ ಗ್ರಾಮೀಣ ಕ್ರೀಡಾಕೂಟ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾ ಕೂಟದಲ್ಲಿ ಪಾಲ್ಗೊಂಡವರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ.

Baba Saheb Ambedkar's 14 feet tall bronze statue was inaugurated by Dalit Sangharsha Samiti, 03/05/2025
ಬೆಂಗಳೂರಿನ ಯಲಹಂಕ ಉಪನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ (ಸಮತಾವಾದ) ಇವರ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ರವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದೆ.

On the occasion of visiting the famous Tulasi Mariyamma temple in Virajapete, 02/05/2025
ವಿರಾಜಪೇಟೆಯ ಪ್ರಸಿದ್ಧ ತುಳಸಿ ಮಾರಿಯಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಂದರ್ಭ.

Congratulations to SSLC 2024–25 Students and Encouragement for Reappearing Students, 02/05/2025
2024~25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಮಹತ್ಸಾಧನೆಗೆ ಕಾರಣರಾದ ಎಲ್ಲ ಶಿಕ್ಷಕ, ಶಿಕ್ಷಕಿಯರು, ತರಬೇತುದಾರರು ಹಾಗು ಪೋಷಕರೂ ಅಭಿನಂದನಾರ್ಹರು. ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ನಿಮ್ಮ ಸಾಮರ್ಥ್ಯಕ್ಕನುಸಾರ ಮುಂದಿನ ವಿದ್ಯಾಭ್ಯಾಸದ ಆಯ್ಕೆಯನ್ನು ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಶುಭ ಹಾರೈಸುತ್ತೇನೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಶರಾಗದೆ ಮತ್ತಷ್ಟು ಪರಿಶ್ರಮದಿಂದ ಪರೀಕ್ಷೆ ಬರೆದು ಯಶಸ್ವಿಯಾಗಿ ಎಂದು ನಿಮಗೂ ಶುಭ ಹಾರೈಸುತ್ತೇನೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಶರಾಗದೆ ಮತ್ತಷ್ಟು ಪರಿಶ್ರಮದಿಂದ ಪರೀಕ್ಷೆ ಬರೆದು ಯಶಸ್ವಿಯಾಗಿ ಎಂದು ನಿಮಗೂ ಶುಭ ಹಾರೈಸುತ್ತೇನೆ.
