Tribute to Senior Congress Leader Mr. Mittu Changappa, 24/04/2025

ಹಿರಿಯ ಕಾಂಗ್ರೆಸ್ ಮುಖಂಡರು, ಕೆಪಿಸಿಸಿ ಮಾಜಿ ಉಪಾಧ್ಯಕ್ಷರು, ಉದ್ಯಮಿ, ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದಿ ರಾಜಕಾರಣಿ ಶ್ರೀ ಮಿಟ್ಟು ಚಂಗಪ್ಪರವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತೀವ ದುಃಖ ಉಂಟಾಗಿದೆ. ಇವರ ಅಗಲಿಕೆಯು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ.
ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಅಪಾರ ಬಂಧು ಬಳಗಕ್ಕೆ, ಅಭಿಮಾನಿ ವರ್ಗಕ್ಕೆ ಮತ್ತು ಕುಟುಂಬದವರಿಗೆ ಆ ಸರ್ವಶಕ್ತ ಭಗವಂತ ಕರುಣಿಸಲಿ ಮತ್ತು ಮೃತರ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.
 
img
 

A blessed occasion of visiting the famous Baraguru Rashe Jadala Devara festival at Gonigadde, Naalkeri village in Ponnampet taluk, 24/04/2025

ಪೊನ್ನಂಪೇಟೆ ತಾಲ್ಲೂಕು ನಾಲ್ಕೇರಿ ಗ್ರಾಮದ ಗೋಣಿಗದ್ದೆಯ ಪ್ರಸಿದ್ಧ ಬರಗೂರು ರಾಶೆ ಜಾದಲ ದೇವರ ಉತ್ಸವಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದ ಶುಭ ಸಂದರ್ಭ.
 
img
 

Panchayati Raj: Empowering Villages, Empowering India, 24/04/2025

ಮಹಾತ್ಮಾ ಗಾಂಧಿಯವರ 'ಗ್ರಾಮ ಸ್ವರಾಜ್ಯ' ಅಥವಾ ಸ್ಥಳೀಯ ಸರ್ಕಾರದ ಕನಸು ಸಾಕಾರಗೊಳಿಸಿದ್ದು 'ಪಂಚಾಯತ್ ರಾಜ್' ವ್ಯವಸ್ಥೆ.ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 73ನೇ ತಿದ್ದುಪಡಿಯ ಮೂಲಕ ಅಧಿಕಾರ ವಿಕೇಂದ್ರೀಕರಣದ ಕ್ರಾಂತಿಕಾರಕ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ತಂದು ದೇಶದ ಕಟ್ಟ ಕಡೆಯ ಪ್ರಜೆಯ ಕೈಗೂ ಅಧಿಕಾರ ನೀಡಿದರು.
 
img
 

On the birth anniversary of Dr. Rajkumar, the legendary actor and singer of Kannada cinema and recipient of the Dadasaheb Phalke Award, I offer my respectful tributes to him, 24/04/2025

ಕನ್ನಡ ಚಿತ್ರ ಲೋಕದ ಖ್ಯಾತ ನಟ ಮತ್ತು ಗಾಯಕ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ. ರಾಜಕುಮಾ‌ರ್
ಅವರ ಜನ್ಮಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು.
 
img
 

The terrorist attack on tourists in Pahalgam, Jammu and Kashmir, is highly condemnable. I extend my heartfelt condolences to the families of the deceased during this time of grief, 24/04/2025

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿ ಖಂಡನೀಯ.ಈ ಭಯೋತ್ಪಾದಕ ದಾಳಿಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ ಇನ್ನೂ ಅನೇಕರು ಮೃತಪಟ್ಟಿರುವುದು ಅತ್ಯಂತ ದುರ್ದೈವದ ಸಂಗತಿ. ದುಃಖದ ಈ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸುತ್ತೇನೆ. ದಾಳಿಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.