Annual Meeting of Mysore Coffee Cooperative Held, 09/05/2025
ಮೈಸೂರು ಜಿಲ್ಲೆ ಯಾದವಗಿರಿಯ ದಿ ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘ ನಿಯಮಿತ ಇದರ 2024-25 ರ ಸಾಲಿನ ವಾರ್ಷಿಕ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

CM Siddaramaiah Inaugurates Patalaamma Devi Rathotsava, 07/05/2025
ಮೂರು ವರ್ಷಗಳಿಗೊಮ್ಮೆ ನಡೆಯುವ ಊರ ಹಬ್ಬ ಪಟಲಾಮ್ಮ ದೇವಿಯ ರಥೋತ್ಸವವನ್ನು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಉದ್ಘಾಟಿಸಿದರು.
ಸಿದ್ದಾಪುರ, ಕನಕನ ಪಾಳ್ಯ, ಯಡಿಯೂರು, ಬೈರಸಂದ್ರ ನಾಗಸಂದ್ರ ಗ್ರಾಮಗಳ ಆದಿ ದೇವತೆಯಾದ ಶ್ರೀ ಪಟಾಲಮ್ಮ ದೇವಿ ರಥೋತ್ಸವದ ಅಂಗವಾಗಿ ಸಾಂಸ್ಕೃತಿಕ ತಂಡಗಳ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು.
ಈ ಪ್ರದರ್ಶನದಲ್ಲಿ ಕೊಡಗು ಸಾಂಸ್ಕೃತಿಕ ತಂಡವು ಭಾಗವಹಿಸಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಶ್ರೀ ಮುನೇಶ್ವರ ಸ್ವಾಮಿ ದೇವಾಲಯಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸಚಿವರಾದ ಶ್ರೀ ಬೈರತಿ ಸುರೇಶ್ ಮತ್ತ್ತು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಹೆಚ್ ಎಂ ರೇವಣ್ಣ ರವರ ಜೊತೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಕೋರಿದೆ.

Our CM Sri Siddaramaiah Congratulates Indian Army for Operation Sindoor Strike, 07/05/2025
ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಕೈಗೊಂಡ ದಾಳಿಗೆ ಹಾಗೂ ದಿಟ್ಟ ಉತ್ತರಕ್ಕೆ ಶ್ರೀ ಸಿದ್ಧರಾಮಯ್ಯ ರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ದೇಶದ ರಕ್ಷಣಾ ಪಡೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿದ ಸಂದರ್ಭದಲ್ಲಿ ದೇಶದ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಭಾರತದ ಸೈನ್ಯ ಸಿಂಧೂರ್ ಆಪರೇಷನ್ ಮುಖಾಂತರ ಸುಮಾರು 9 ಉಗ್ರಗಾಮಿಗಳ ನೆಲೆಯನ್ನು ನಾಶಪಡಿಸಿದ ಭಾರತದ ನಡೆಯನ್ನು ಬೆಂಬಲಿಸಿದರು .
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಬೈರತಿ ಸುರೇಶ್ ,ಶ್ರೀ ಪ್ರಿಯಾಂಕ ಖರ್ಗೆ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಬೈರತಿ ಸುರೇಶ್ ,ಶ್ರೀ ಪ್ರಿಯಾಂಕ ಖರ್ಗೆ ರವರು ಉಪಸ್ಥಿತರಿದ್ದರು.

Operation Sindoor: Indian Army's Strong Response to Kashmir Terror Attack, 07/05/2025
ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ.
ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ.ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ.
ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ.ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ.

My wife Smt. Kanchan Ponnanna participated as chief guest and wished good luck in the closing ceremony of the hockey tournament organized by Kodava Students Association, Mysore, 05/05/2025
ಕೊಡವ ವಿದ್ಯಾರ್ಥಿ ಸಂಘ,ಮೈಸೂರು ಇವರ ವತಿಯಿಂದ ಆಯೋಜನೆಗೊಂಡಿದ್ದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.