Monsoon Hop Marathon 2026 Launched in Gonikoppal, 07/09/2026
ಕೊಡಗಿನ ಗೋಣಿಕೊಪ್ಪಲುವಿನಲ್ಲಿ ನಡೆಯುತ್ತಿರುವ "ಮಾನ್ಸೂನ್ ಹಾಪ್ ಮ್ಯಾರಥಾನ್ ರೇಸ್ - 2026" ರ ಪ್ರತಿಯೋಗಿತಕ್ಕೆ, ಇಂದು ಮಾನ್ಯ ಸಚಿವರಾದ ಶ್ರೀ ಕೆ.ಜೆ ಜಾರ್ಜ್ ರವರೊಂದಿಗೆ ಚಾಲನೆ ನೀಡಿ ಶುಭ ಹಾರೈಸಿದ ಸಂದರ್ಭ.
ಈ ಕಾರ್ಯಕ್ರಮಕ್ಕೆ ನನ್ನೊಂದಿಗೆ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಶ್ರೀ ಅರುಣ್ ಮಾಚಯ್ಯರವರು ಉಪಸ್ಥಿತರಿದ್ದರು.

Virajpet Women’s Congress Office Inaugurated, 07/09/2026
ವಿರಾಜಪೇಟೆಯ ಮಹಿಳಾ ಕಾಂಗ್ರೆಸ್ ನೂತನ ಕಟ್ಟಡ ಕಚೇರಿಯನ್ನು ಉದ್ಘಾಟಿಸಿದ ಬಳಿಕ ನೂತನವಾಗಿ ಆಯ್ಕೆಯಾದ ವಿರಾಜಪೇಟೆ ಬ್ಲಾಕ್ ಮಹಿಳಾ ವಲಯ ಅಧ್ಯಕ್ಷರುಗಳ, ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಹತ್ತಾರು ಮಹಿಳಾ ಕಾರ್ಯಕರ್ತರನ್ನು ಪಕ್ಷದ ಶಲ್ಯ ಹಾಗೂ ಬಾವುಟ ನೀಡುವುದರ ಮುಖಾಂತರ ಪಕ್ಷಕ್ಕೆ ಮಾಡಿಕೊಂಡ ಸಂದರ್ಭ.
ಇದೇ ಸಂದರ್ಭದಲ್ಲಿ ಪಕ್ಷಕ್ಕೆ ಸೇರಿದ ಎಲ್ಲರಿಗೂ ಶುಭ ಕೋರಲಾಯಿತು.

Praja Seva Programme Launched in Kodagu, 05/09/2026
ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಕಾರ್ಯಕ್ರಮಕ್ಕೆ ಇಂದು ಕೊಡಗು ಜಿಲ್ಲೆಯಲ್ಲಿ ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ನರೇಂದ್ರ ಸ್ವಾಮಿ ರವರೊಂದಿಗೆ ಚಾಲನೆ ನೀಡಲಾಯಿತು.
ಜನಸಾಮಾನ್ಯರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೇರವಾಗಿ ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಆಹ್ವಾನಗಳನ್ನು ಹೇಳಿ ಶೀಘ್ರದಲ್ಲೇ ಅವರಿಗೆ ಪರಿಹಾರ ಮಾಡಿ ಕೊಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ .
ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳು ಹಾಗೂ ಅಗತ್ಯ ನಾಗರಿಕ ಸೇವೆಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ನೇರವಾಗಿ, ಸುಲಭವಾಗಿ ತಲುಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ.
ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸರ್ಕಾರದ ಸೌಲಭ್ಯಗಳು ಪಾರದರ್ಶಕವಾಗಿ ಸಿಗಬೇಕು ಹಾಗೂ ಸಾರ್ವಜನಿಕರ ಕುಂದುಕೊರತೆಗಳು ಒಂದೇ ವೇದಿಕೆಯಲ್ಲಿ ಪರಿಹಾರವಾಗಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ಹಂಚಿಕೊಳ್ಳಲಾಯಿತು.
ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅವರ ಏಳಿಗೆಗೆ ಶ್ರಮಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ.
ಈ ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Virajpet Guarantee Scheme Review Held in Palibetta, 05/09/2026
ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಭೆಯನ್ನು ಪಾಲಿಬೆಟ್ಟದಲ್ಲಿ ಆಯೋಜಿಸಲಾಯಿತು.
ಈ ಸಭೆಯಲ್ಲಿ ಗೃಹಜೋತಿ, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ,ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಈ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ ,ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಾನ್ಸನ್, ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Anti-Kasturirangan Meeting Held in Madikeri, 05/09/2026
ಮಡಿಕೇರಿಯಲ್ಲಿ ನಡೆದ ಕಸ್ತೂರಿರಂಗನ್ ವಿರೋಧಿ ಹೋರಾಟ ಸಮಿತಿಯ ಸಭೆಯಲ್ಲಿ ಭಾಗವಹಿಸಿದೆ.
ಈ ಸಭೆಯಲ್ಲಿ ಆಗಮಿಸಿದ ಪರಿಸರವಾದಿಗಳು, ಸಾರ್ವಜನಿಕರು, ಪ್ರಮುಖರ ಮಾತುಗಳನ್ನು ಆಲಿಸಿದ ಬಳಿಕ ಮಾತನಾಡಿ ಕಸ್ತೂರಿರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ನಾವು ಒಪ್ಪಲು ಸಿದ್ಧವಿಲ್ಲ. ವರದಿಯಲ್ಲಿ ಜನವಸತಿ ಪ್ರದೇಶವನ್ನು ಹೊರತುಪಡಿಸಿ ಆ ವರದಿ ಅನುಷ್ಠಾನಗೊಳಿಸಲು ನಮ್ಮ ವಿರೋಧವಿಲ್ಲ ಎಂಬ ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಹಾಗೂ ಮಾನ್ಯ ಪ್ರಧಾನ ಮಂತ್ರಿಗಳೊಂದಿಗೆ ನಿಯೋಗವನ್ನು ಕರೆದುಕೊಂಡು ಹೋಗಿ ಅವರಲ್ಲಿ ಮನವಿ ನೀಡುವಂತೆ ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಶಾಸಕರುಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
