Visited the house of municipality member Asha Subbaiah who recently passed away and consoled the family of the deceased, 18/07/2025

ಇತ್ತೀಚೆಗೆ ನಿಧನರಾದ ಪುರಸಭೆ ಸದಸ್ಯೆ ಆಶಾ ಸುಬ್ಬಯ್ಯರವರ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಾಯಿತು
 
 
 
 
 

The auspicious occasion of meeting Sri Someshwaranath Swamiji of Adichunchanagiri Branch Mutt in Mysore and taking blessings, 17/07/2025

ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಪರಮಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದ ಶುಭ ಸಂದರ್ಭ.
 
 
 
 
 

Today met Karnataka State Government Health Minister Shri Dinesh Gundurao at Vidhana Soudha office and discussed many important topics related to Health Department in our constituency. Requested Honorable Health Minister to explain the requirements and he, 17/07/2025

ಇಂದು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು. ಕ್ಷೇತ್ರಾದ್ಯಂತ ಜನರ ಅವಶ್ಯಕತೆಗಳು ಹಾಗೂ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾನ್ಯ ಆರೋಗ್ಯ ಸಚಿವರಿಗೆ ವಿವರಿಸಿ ನಮ್ಮ ಕ್ಷೇತ್ರಗಳಲ್ಲಿನ ಆಸ್ಪತ್ರೆಗಳ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದೆ. ವಿಶೇಷವಾಗಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗಳ ಮೇಲ್ದರ್ಜೆಗೆ ಬಜೆಟ್ ನಲ್ಲಿ ಅನುಮೋದನೆ ದೊರಕಿದ್ದು ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಹಾಗೂ ವೈದ್ಯರುಗಳ ಕೊರತೆಯ ಬಗ್ಗೆ ಸಚಿವರ ಗಮನ ಸೆಳೆದಾಗ, ಕೂಡಲೇ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂ ಹಲವು ಬೇಡಿಕೆಗಳನ್ನು ಹಂತಹಂತವಾಗಿ ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮಾನ್ಯ ಸಚಿವರು ಭರವಸೆ ನೀಡಿದರು. ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು, ಸರಕಾರದ ಅಭಿಯಾನ ನಿರ್ದೇಶಕರು‌ ಮತ್ತು ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
 
 
 
 
 
 

Women of the state have made history by traveling 500 crore times in transport buses for reasons like employment, education, health, one of the guarantee scheme of the state Congress government, 16/07/2025

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ' ಯೋಜನೆಯಡಿ ಉದ್ಯೋಗ, ಶಿಕ್ಷಣ, ಆರೋಗ್ಯ ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸ್ವಾವಲಂಬನೆಯ ಮಹತ್ವದ ಹೆಜ್ಜೆ 'ಶಕ್ತಿ' ಯೋಜನೆಯ ಅಭೂತಪೂರ್ವ ಯಶಸ್ಸು, ಜನಬೆಂಬಲ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನಪರ ಆಡಳಿತಕ್ಕೆ ಮತ್ತಷ್ಟು ಶಕ್ತಿ ತುಂಬಿದೆ..
 
 
 
 
 

Attended the National Advisory Committee meeting of All India National Congress Party Backward Classes Unit held at Bharat Jodo Bhavan of Bangalore KPCC office., 16/07/2025

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭ..