Kunjalageri residents of Virajpet inaugurated a new electricity route installed to supply quality electricity., 29/08/2025
ವಿರಾಜಪೇಟೆಯ ಕುಂಜಲಗೇರಿ ನಿವಾಸಿಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಅಳವಡಿಸಿದ ನೂತನ ವಿದ್ಯುತ್ ಮಾರ್ಗದ ಉದ್ಘಾಟನೆಯನ್ನು ನೆರವೇರಿಸಿ ಶುಭ ಕೋರಿದೆ.

Senior advocate Professor Ravivarma Kumar was felicitated at a program organized by Bangalore Lawyers Association and Ravivarma Kumar Associates at Vidhanasoudha Banquet Hall. On this occasion, participated along with Honorable Chief Minister Shri Siddara, 28/08/2025
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು .ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರ ಜೊತೆ ಭಾಗವಹಿಸಿ ಶುಭ ಕೋರಲಾಯಿತು.
Participated in the progress review meeting of the Department of Cooperation under the chairmanship of Honorable Chief Minister Shri Siddaramaiah at his home office Krishna., 28/08/2025
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರ ಗೃಹ ಕಚೇರಿ ಕೃಷ್ಣಾದಲ್ಲಿಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು..
Participated in aid distribution program to selected beneficiaries under Amrut Nagaroththan phase-04 at Virajpet assembly constituency Virajpet taluk., 28/08/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವಿರಾಜಪೇಟೆ ತಾಲೂಕಿನಲ್ಲಿ ಅಮೃತ್ ನಗರೋತ್ಥಾನ ಹಂತ-04 ರ ಅಡಿಯಲ್ಲಿ ಆಯ್ದ ಫಲಾನುಭವಿಗಳಿಗೆ ಸಹಾಯಧನವನ್ನು ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು..
Inauguration of newly constructed concrete road in Vidyanagara, Virajpet Municipality area, Virajpete assembly constituency., 28/08/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆಯನ್ನು ನೆರವೇರಿಸಲಾಯಿತು.



