Minister Directs Swift Action on Ponnampet, Virajpet Civic Issues, 01/09/2026

ಕರ್ನಾಟಕ ರಾಜ್ಯ ಘನ ಸರಕಾರದ ಮಾನ್ಯ ಪೌರಾಡಳಿತ ಸಚಿವರಾದ ಶ್ರೀ ಹೆಚ್.ಸಿ. ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವರ್ಚುವಲ್ ಮುಖಾಂತರ ಭಾಗವಹಿಸಿ, ಕುಡಿಯುವ ನೀರು, ಸ್ವಚ್ಛತೆ, ಒಳಚರಂಡಿ, ರಸ್ತೆ , ಪುರಸಭೆ ಕಟ್ಟಡದ ಕಾಮಗಾರಿ ಮೂಲಸೌಕರ್ಯ ಅಭಿವೃದ್ಧಿ, ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯತಿ ಹಾಗೂ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿಗಳು ಮತ್ತು ಅಧಿಕಾರಿಗಳನ್ನು ಕೂಡಲೇ ನೇಮಕ ಮಾಡುವ ಕುರಿತು ಪ್ರಸ್ತಾಪಿಸಲಾಯಿತು.
ಈ ಬೇಡಿಕೆಗಳಿಗೆ ಮಾನ್ಯ ಸಚಿವರು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು.