Parane Sports Festival 2026 Celebrates Rural Sporting Talent, 04/10/2026
ಮಡಿಕೇರಿ ತಾಲೂಕು ಪಾರಣೆ ಗ್ರಾಮದಲ್ಲಿ ಆಯೋಜನೆಗೊಂಡ, ಪಾರಾಣೆ ಕ್ರೀಡಾ ಹಬ್ಬ - 2026, ಅಂತರ್ ಗ್ರಾಮಾಂತರ ಕೈಲ್ ಮೂರ್ತ ಕ್ರೀಡಾಕೂಟಕ್ಕೆ ಶುಭ ಕೋರುತ್ತಾ ಇತ್ತೀಚಿನ ದಿನಗಳಲ್ಲಿ ಕೊಡಗಿನ ಕ್ರೀಡಾಪಟುಗಳು ದೇಶ ಮಾತ್ರವಲ್ಲ ವಿಶ್ವಮಟ್ಟದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದು ಅನೇಕ ಪದಕಗಳನ್ನು ತಮ್ಮ ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಕೊಡಗಿನ ಜನತೆ ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿಯನ್ನು ಹೊಂದಿದವರಾಗಿದ್ದು, ಇಂತಹ ಕ್ರೀಡಾಕೂಟಗಳು ಪ್ರತಿಯೊಬ್ಬನ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಿದೆ. ಕ್ರೀಡಾಪಟುಗಳು ಕ್ರೀಡೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಲ್ಲಿ ಅವರ ಭವಿಷ್ಯವನ್ನು ರೂಪಿಸುವುದರಲ್ಲಿ ಇಂತಹ ಕ್ರೀಡೆಗಳು ಸಹಕಾರಿಯಾಗಲಿದೆ.
