Tiger Attack Sparks Concern in Belluru Village; Forest Officials Directed to Act, 04/11/2026

ಇತ್ತೀಚೆಗೆ ಪೊನ್ನಂಪೇಟೆ ತಾಲೂಕು ಹುದಿಕೇರಿ ಸಮೀಪದ ಬೆಳ್ಳೂರು ಗ್ರಾಮದ ಬಾಚೀರ ವಾಸು ದೇವಯ್ಯ ಅವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾದ ಘಟನೆ ನಡೆದಿದೆ.
ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ, ಹಸುವಿನ ಮಾಲೀಕರು ಹಾಗೂ ಗ್ರಾಮಸ್ಥರನ್ನು ಖುದ್ದಾಗಿ ಭೇಟಿಯಾಗಿ, ವನ್ಯಜೀವಿಗಳಿಂದ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಅವರ ಅಹವಾಲುಗಳನ್ನು ಆಲಿಸಲಾಯಿತು.
ಬಳಿಕ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ, ಗ್ರಾಮಸ್ಥರಲ್ಲಿರುವ ಆತಂಕವನ್ನು ದೂರಮಾಡಲು ಶೀಘ್ರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಕ್ಯಾಮೆರಾಗಳು ಹಾಗೂ ಸುಧಾರಿತ ತಂತ್ರಜ್ಞಾನದ ನೆರವಿನಿಂದ ಹುಲಿಯ ಚಲನವಲನವನ್ನು ತಕ್ಷಣ ಪತ್ತೆಹಚ್ಚಿ, ಆದಷ್ಟು ಬೇಗ ಸೆರೆಹಿಡಿಯುವ ಮೂಲಕ ಗ್ರಾಮಸ್ಥರಲ್ಲಿ ಸುರಕ್ಷತೆ ಮತ್ತು ನೆಮ್ಮದಿಯ ಭಾವನೆ ಮೂಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.