Anti-Kasturirangan Meeting Held in Madikeri, 05/09/2026
ಮಡಿಕೇರಿಯಲ್ಲಿ ನಡೆದ ಕಸ್ತೂರಿರಂಗನ್ ವಿರೋಧಿ ಹೋರಾಟ ಸಮಿತಿಯ ಸಭೆಯಲ್ಲಿ ಭಾಗವಹಿಸಿದೆ.
ಈ ಸಭೆಯಲ್ಲಿ ಆಗಮಿಸಿದ ಪರಿಸರವಾದಿಗಳು, ಸಾರ್ವಜನಿಕರು, ಪ್ರಮುಖರ ಮಾತುಗಳನ್ನು ಆಲಿಸಿದ ಬಳಿಕ ಮಾತನಾಡಿ ಕಸ್ತೂರಿರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ನಾವು ಒಪ್ಪಲು ಸಿದ್ಧವಿಲ್ಲ. ವರದಿಯಲ್ಲಿ ಜನವಸತಿ ಪ್ರದೇಶವನ್ನು ಹೊರತುಪಡಿಸಿ ಆ ವರದಿ ಅನುಷ್ಠಾನಗೊಳಿಸಲು ನಮ್ಮ ವಿರೋಧವಿಲ್ಲ ಎಂಬ ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಹಾಗೂ ಮಾನ್ಯ ಪ್ರಧಾನ ಮಂತ್ರಿಗಳೊಂದಿಗೆ ನಿಯೋಗವನ್ನು ಕರೆದುಕೊಂಡು ಹೋಗಿ ಅವರಲ್ಲಿ ಮನವಿ ನೀಡುವಂತೆ ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಶಾಸಕರುಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
