Special Meeting on Virajpet Constituency Development Works, 05/09/2026

ಬೆಂಗಳೂರಿನ ವಿಕಾಸ ಸೌಧದಲ್ಲಿರುವ ಕೊಠಡಿ ಸಂಖ್ಯೆ 222 ರಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ವಿಶೇಷ ಸಭೆ ನಡೆದಿದೆ.
ಈ ಸಭೆಯಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಇಲಾಖೆಗಳ ಕಾಮಗಾರಿಗಳ ಸಮಗ್ರ ವರದಿಯನ್ನು ತರಿಸಿಕೊಂಡು ಕಾಮಗಾರಿಗಳ ಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರಿಂದ ಮಾಹಿತಿ ಪಡೆದು ಹಲವು ಸಲಹೆ ಸೂಚನೆಗಳನ್ನು ನೀಡಿದ ಸಂದರ್ಭ. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರದಲ್ಲೇ ಮುಗಿಸಿ ವರದಿಯನ್ನು ನೀಡಬೇಕೆಂದು ತಿಳಿಸಿದೆ.