District In-charge Minister Shri N.S. Bhosaraju and Madikeri Constituency MLA Dr. Manthar Gowda met with District Guarantee Implementation Committee President Shri Dharmaja Uttappa and Revenue Minister Shri Krishna Byre Gowda to discuss the ongoing farmer, 05/11/2025

ಸಿ ಅಂಡ್ ಡಿ ಜಾಗದ ಸಮಸ್ಯೆ ಬಗ್ಗೆ ರೈತರು ನಡೆಸುತ್ತಿರುವ ಹೋರಾಟದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್.ಭೋಸರಾಜು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಜೊತೆ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸವಿಸ್ತಾರವಾಗಿ ವಿವರಿಸಲಾಯಿತು .ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಿತಿಯನ್ನು ರಚಿಸಲಾಗುವುದೆಂದು ಭರವಸೆ ನೀಡಿದರು.