Participated in the process by filling application at residence in Belluru, Ponnampete Taluk, Hudikeri today as part of the statewide SIR program. In the message given to the public later, good people should be selected to build a better society. Everyone, 06/07/2026

ರಾಜ್ಯಾದಂತ ನಡೆಯುವತ್ತಿರುವ ಎಸ್ಐಆರ್ ಕಾರ್ಯಕ್ರಮದ ಭಾಗವಾಗಿ ಇಂದು ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ನಿವಾಸದಲ್ಲಿ ಅರ್ಜಿ ಭರ್ತಿ ಮಾಡುವ ಮೂಲಕ, ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದೆ.
ಬಳಿಕ ಸಾರ್ವಜನಿಕರಿಗೆ ನೀಡಿದ ಸಂದೇಶದಲ್ಲಿ, ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರಲೇಬೇಕು. ಮತದಾನ ಎಂಬುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಹಕ್ಕು ಮತ್ತು ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ಯಾರೂ ಇದನ್ನು ಕಸಿದುಕೊಳ್ಳದಂತೆ ನಾವುಗಳು ಜಾಗೃತಿ ವಹಿಸಿಕೊಳ್ಳಬೇಕು. ಹಾಗಾಗಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ನೀಡಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಲಾಯಿತು