Discussed Key Issues Facing Kodagu Grantless Schools, 07/10/2026
ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಯ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ನನ್ನನ್ನು ಭೇಟಿಯಾಗಿ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಪ್ರಮುಖ ವಿಷಯಗಳ ಕುರಿತು ಹಾಗೂ ಕೊಡಗಿನ ಅನುದಾನ ರಹಿತ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಯ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಕೋಟ್ರಂಗಡ ತಿಮ್ಮಯ್ಯ, ಸಮಿತಿ ಸದಸ್ಯರಾದ ಮಾದಂಡ ತಿಮ್ಮಯ್ಯ, ಮಲ್ಲಂಗಡ ನಿರನ್ ಉತ್ತಪ್ಪ ಹಾಗೂ ಸಚಿನ್ ವಾಸುದೇವ್ ರವರು ಉಪಸ್ಥಿತರಿದ್ದರು.
