Congress Stages Massive Protest Against SIR Process at Gonikoppal Bus Stand, 07/11/2026
ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗೋಣಿಕೊಪ್ಪಲಿನ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿ, SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ಕರ್ತವ್ಯವಾಗಿದ್ದು, ಜನರ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದು ತಿಳಿಸಿದೆ.
