Youth Parliament Programme 2026 Launched to Promote Constitutional Awareness, 07/11/2026
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 2026ನೇ ಸಾಲಿನ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಯುವ ಸಂಸತ್ತು ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಲಾಯಿತು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರತಿಯೊಬ್ಬರೂ ದೇಶದ ಸಂವಿಧಾನವನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು. ಸಂವಿಧಾನದ ಆಶಯಗಳು ಮತ್ತು ಮೌಲ್ಯಗಳನ್ನು ಅರಿತುಕೊಂಡಾಗ ಮಾತ್ರ ಸಮಾನತೆ ಹಾಗೂ ಸಾಮಾಜಿಕ ನ್ಯಾಯ ಆಧಾರಿತ ಸಮ ಸಮಾಜವನ್ನು ನಿರ್ಮಿಸಲು ಸಾಧ್ಯ.
ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೂಲಕ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ದೊರೆತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಸಮಾನ ರಾಜಕೀಯ ಹಕ್ಕು ಕಲ್ಪಿಸಲಾಗಿದೆ.
ಅಲ್ಲದೆ, ಪ್ರತಿಯೊಂದು ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೂ ನಿರ್ದಿಷ್ಟ ಕರ್ತವ್ಯ ಮತ್ತು ಜವಾಬ್ದಾರಿಗಳಿದ್ದು, ತಮ್ಮ ಕಾರ್ಯವ್ಯಾಪ್ತಿಯೊಳಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವುದು ಅಗತ್ಯವಾದದ್ದು.
ಯುವಜನರಲ್ಲಿ ಸಂವಿಧಾನ, ಪ್ರಜಾಪ್ರಭುತ್ವ, ಸಮಾನತೆ ಮತ್ತು ನಾಗರಿಕ ಹಕ್ಕುಗಳ ಕುರಿತು ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ.
