Visit to home of tiger attack victim, 12/04/2022
ಹುಲಿ ದಾಳಿಯಿಂದ ಮೃತಪಟ್ಟ ಕೂಲಿ ಕಾರ್ಮಿಕ ಗಣೇಶ್ (ಪುಟ್ಟ) ಅವರ ಮನೆಗೆ ಭೇಟಿ ಕೊಟ್ಟು ಅವರ ಕುಟುಂಬಸ್ತರಿಗೆ ಸಾಂತ್ವನ ಕೋರಿದೆ. ಸರ್ಕಾರ ಇವರ ಕುಟುಂಬಕ್ಕೆ ಘೋಷಿಸಿರುವ ಪರಿಹಾರ ಆದಷ್ಟು ಶೀಘ್ರದಲ್ಲೇ ಒದಗಿಸುವ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನ್ನ ವೈಯಕ್ತಿಕ ಪರಿಹಾರದ ಚೆಕ್ ಗಣೇಶ್ ಅವರ ಕುಟುಂಬಕ್ಕೆ ಹಸ್ತಾಂತರಿಸಿದೆ. ಸ್ಥಳದಲ್ಲೇ ಅರಣ್ಯ ಇಲಾಖೆಯ ಮುಖ್ಯಸ್ಥರಾದ ಪಿ.ಸಿ.ಸಿ.ಎಫ್ ವಿಜಯ್ ಕುಮಾರ್ ಗೋಗಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಘಟನೆಗೆ ಕಾರಣವಾದ ಹುಲಿಯನ್ನು ಹಿಡಿದು ಜನರ ಆತಂಕ ನಿವಾರಣೆ ಮಾಡಲು ಒತ್ತಾಯಿಸಿ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದೆ. ಡಿ.ಎಫ್.ಓ ಚಕ್ರಪಾಣಿ ಮತ್ತು ಎ.ಟಿ.ಪೂವಯ್ಯ ಅವರ ಜೊತೆ ಕೂಡ ವಿಷಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಮಾಡಿದೆ. ಬಿಟ್ಟಂಗಾಲ ಸಮೀಪ ಕಂಡಂಗಾಲ ಗ್ರಾಮದಲ್ಲಿ ನಡೆದ ಈ ಅಹಿತಕರ ಘಟನೆ ಕೇವಲ ಒಂದು ಪ್ರತ್ಯೇಕ ಘಟನೆ ಎಂದು ನೋಡದೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷದ ಭಾಗವಾಗಿ ನೋಡಿ ಪೂರ್ಣಪ್ರಮಾಣದ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಗಣೇಶ್ ಅವರ ಮನೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.
#Coorg #Kodagu #Tiger #AnimalConflict #TigerAttack #Madikeri #Virajpet #Ponnampet #Kandangala #Bittangala