Book Launch Ceremony of ‘Chalisuva Bande D.K. Shivakumar’ Held in Mysuru., 13/11/2026

 
 

ಮೈಸೂರಿನ ನಾಲ್ಕನೇ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆದ ‘ಚಲಿಸುವ ಬಂಡೆ ಡಿ.ಕೆ. ಶಿವಕುಮಾರ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಾ. ರಾಮ್ಯಾ ವೈ.ಎನ್. ಭಾಗವಹಿಸಿದರು. ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಪಿ.ಎಂ. ನರೇಂದ್ರ ಸ್ವಾಮಿ, ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಶ್ರೀಮತಿ ಉಮಾಶ್ರೀ, ಶಾಸಕರಾದ ಶ್ರೀ ತನ್ವೀರ್ ಸೇಠ್, ಶ್ರೀ ಎ.ಆರ್. ಕೃಷ್ಣಮೂರ್ತಿ, ಶ್ರೀ ಜಿ.ಟಿ. ದೇವೇಗೌಡ, ಸಂಸದರಾದ ಶ್ರೀ ಸುನಿಲ್ ಬೋಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಎಚ್.ಎಂ. ರೇವಣ್ಣ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.