Dignitaries Attend Suttur Mutt Event Alongside Minister Yatindra Siddaramaiah and MLA Tanveer Seth., 13/11/2026
ಮೈಸೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಾ. ಎಂ. ವೀರಪ್ಪ ಮೊಯ್ಲಿ ಅವರು ಜಾಗತಿಕ ಸಂಸ್ಕೃತಿಯ ಕುರಿತು ರಚಿಸಿರುವ ‘ವಿಶ್ವಸಂಸ್ಕೃತಿಯ ಮಹಾಯಾನ’ ಎಂಬ ಗದ್ಯ ಮಹಾಕಾವ್ಯದ ನಾಲ್ಕನೇ ಸಂಪುಟದ ಲೋಕಾರ್ಪಣೆ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರೊಂದಿಗೆ ಭಾಗವಹಿಸಲಾಯಿತು.
ಈ ಸಮಾರಂಭದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಮಾನ್ಯ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರಾದ ಶ್ರೀ ತನ್ವೀರ್ ಸೇಠ್, ನಂಜನಗೂಡು ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಎಚ್.ಎಂ. ರೇವಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
