A.S. Ponnanna Assures Priority Action to Address Basic Infrastructure Issues in Marapala Paisari, 14/11/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಮರಪಾಲ ಪೈಸಾರಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ನಿವಾಸಿಗಳ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಹಂತ ಹಂತವಾಗಿ ಶೀಘ್ರವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಪೈಸಾರಿ ನಿವಾಸಿಗಳು ತಮ್ಮ ಪ್ರದೇಶಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಸಲ್ಲಿಸಿದರು.
ನಿವಾಸಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದ ಸಂದರ್ಭ.
