Ponnampete Block Congress felicitates Ponnanna on appointment as CM’s Political Secretary, 15/08/2026

ಸಂಪುಟ ದರ್ಜೆ ಸ್ಥಾನಮಾನ ದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ನನ್ನನ್ನು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಬಾಳಲೆ ವಲಯ ಅಧ್ಯಕ್ಷರಾದ ಕೋದಂಡ ಸೋಮಣ್ಣ, ಪೊನ್ನಂಪೇಟೆ ಪಟ್ಟಣ್ಣ ಪಂಚಾಯಿತಿ ಉಪಾಧ್ಯಕ್ಷರಾದ ಆಲೀರ ರಶೀದ್, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಗಿರೀಶ್, ಅಣ್ಣಳ್ಳಮಾಡ ಹರೀಶ್ ಪೂವಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.