Today met Karnataka State Government Health Minister Shri Dinesh Gundurao at Vidhana Soudha office and discussed many important topics related to Health Department in our constituency. Requested Honorable Health Minister to explain the requirements and he, 17/07/2025
ಇಂದು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು. ಕ್ಷೇತ್ರಾದ್ಯಂತ ಜನರ ಅವಶ್ಯಕತೆಗಳು ಹಾಗೂ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾನ್ಯ ಆರೋಗ್ಯ ಸಚಿವರಿಗೆ ವಿವರಿಸಿ ನಮ್ಮ ಕ್ಷೇತ್ರಗಳಲ್ಲಿನ ಆಸ್ಪತ್ರೆಗಳ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದೆ. ವಿಶೇಷವಾಗಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗಳ ಮೇಲ್ದರ್ಜೆಗೆ ಬಜೆಟ್ ನಲ್ಲಿ ಅನುಮೋದನೆ ದೊರಕಿದ್ದು ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಹಾಗೂ ವೈದ್ಯರುಗಳ ಕೊರತೆಯ ಬಗ್ಗೆ ಸಚಿವರ ಗಮನ ಸೆಳೆದಾಗ, ಕೂಡಲೇ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂ ಹಲವು ಬೇಡಿಕೆಗಳನ್ನು ಹಂತಹಂತವಾಗಿ ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮಾನ್ಯ ಸಚಿವರು ಭರವಸೆ ನೀಡಿದರು. ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು, ಸರಕಾರದ ಅಭಿಯಾನ ನಿರ್ದೇಶಕರು ಮತ್ತು ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.