Ammathira Ain Mane Reconstruction Completed; Housewarming Ceremony Held at Badagarkeri, 17/11/2026
ಕೊಡಗಿನ ಪ್ರಮುಖ ಐನ್ ಮನೆಗಳಲ್ಲಿ ಒಂದಾಗಿರುವ ಪೊನ್ನಂಪೇಟೆ ತಾಲೂಕಿನ ಬಾಡಗರಕೇರಿಯ ಅಮ್ಮತ್ತೀರ ಐನ್ ಮನೆಯ ಪುನರ್ ನಿರ್ಮಾಣ ಕಾಮಗಾರಿಯು ಕುಟುಂಬಸ್ಥರ ಸಹಕಾರ ಹಾಗೂ ಸರ್ಕಾರದ ಅನುದಾನದ ನೆರವಿನಿಂದ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇಂದು ಶುಭ ಮುಹೂರ್ತದಲ್ಲಿ ಆಯೋಜಿಸಲಾಗಿದ್ದ ಐನ್ ಮನೆ ಪ್ರವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಶುಭ ಹಾರೈಸಲಾಯಿತು.
ಕೊಡಗಿನ ವಿಶಿಷ್ಟ ಜನಜೀವನ, ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಐನ್ ಮನೆಗಳು ಅತ್ಯಂತ ಮಹತ್ವದ ಸ್ಥಾನವನ್ನು ಹೊಂದಿವೆ. ಆಧುನಿಕತೆಯ ಭರಾಟೆಯ ನಡುವೆಯೂ ನಮ್ಮ ಪೂರ್ವಜರು ನಮಗೆ ಕೊಡುಗೆಯಾಗಿ ನೀಡಿರುವ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚಾರ-ವಿಚಾರಗಳನ್ನು ಮರೆಯದೆ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಪ್ರತಿಯೊಂದು ಕುಟುಂಬದ ಐನ್ ಮನೆಯು ಆ ಕುಟುಂಬದ ಇತಿಹಾಸ, ಪರಂಪರೆ ಮತ್ತು ಸಾಂಸ್ಕೃತಿಕ ಅಸ್ಮಿತೆಯ ಪ್ರತೀಕವಾಗಿದೆ. ಯಾವುದೇ ಶುಭಕಾರ್ಯ ಅಥವಾ ಧಾರ್ಮಿಕ ಚಟುವಟಿಕೆಗಳನ್ನು ಐನ್ ಮನೆಯಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ಆರಂಭಿಸುವುದು ನಮ್ಮ ಪೂರ್ವಜರು ಹಾಕಿಕೊಟ್ಟ ಸಂಪ್ರದಾಯವಾಗಿದೆ. ಇಂತಹ ಸಾಂಪ್ರದಾಯಿಕ ಆಚರಣೆಗಳನ್ನು ನಿರಂತರವಾಗಿ ಪಾಲಿಸಿಕೊಂಡು ಬರುವ ಮೂಲಕ ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ.
