**Prajasoudha Construction in Ponnampet Inspected; Officials Directed to Expedite Work and Ensure Quality**, 17/11/2026
ಪೊನ್ನಂಪೇಟೆ ತಾಲೂಕಿನಲ್ಲಿ ನಿರ್ಮಾಣವಾಗುತ್ತಿರುವ ಪ್ರಜಾಸೌಧದ ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರಜಾಸೌಧ ಕಟ್ಟಡದ ವಿನ್ಯಾಸ ಹಾಗೂ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ, ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಕಾಮಗಾರಿಯನ್ನು ಇನ್ನಷ್ಟು ವೇಗಗೊಳಿಸಿ, ನಿಗದಿತ ಕಾಲಮಿತಿಯೊಳಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.
