**Bhoomi Pooja Held for New 66/11 KV Power Substation and Electricity Line in Beetikadu to Resolve Power Issues in Siddapura Region**, 18/11/2026
ವಿರಾಜಪೇಟೆ ತಾಲೂಕು ಸಿದ್ದಾಪುರ ಭಾಗದ ಬೀಟಿಕಾಡು ಪ್ರದೇಶದಲ್ಲಿ ನೂತನ 66/11 ಕೆ.ವಿ. ವಿದ್ಯುತ್ ಪ್ರಸರಣ ಘಟಕದ ಸ್ಥಾಪನೆ ಹಾಗೂ ಹೊಸ ವಿದ್ಯುತ್ ಮಾರ್ಗದ ಅಳವಡಿಕೆ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಬಳಿಕ ಮಾತನಾಡುತ್ತಾ 66/11 ಕೆ.ವಿ. ಸಾಮರ್ಥ್ಯದ ಈ ವಿದ್ಯುತ್ ಪ್ರಸರಣ ಘಟಕ ಕಾರ್ಯಾರಂಭಗೊಂಡ ಬಳಿಕ ಸಿದ್ದಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ರಾಮೀಣ ಭಾಗದ ಜನರಿಗೆ ಉತ್ತಮ ಹಾಗೂ ನಿರಂತರ ವಿದ್ಯುತ್ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಗೆ ವಿಶೇಷ ಅನುದಾನ ಒದಗಿಸಿದೆ. ಇದರಿಂದ ಕೃಷಿಕರು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಹೆಚ್ಚಿನ ಅನುಕೂಲವಾಗಲಿದೆ.
ನೂತನ ವಿದ್ಯುತ್ ಮಾರ್ಗದ ಅಳವಡಿಕೆಯಿಂದ ವಿದ್ಯುತ್ ಪ್ರಸರಣದ ಗುಣಮಟ್ಟ ಸುಧಾರಣೆಯಾಗಲಿದ್ದು, ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಹಕಾರಿಯಾಗಲಿದೆ.
ಈಗಾಗಲೇ ಕ್ಷೇತ್ರದಾದ್ಯಂತ ವಿದ್ಯುತ್ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಅಗತ್ಯ ಅನುದಾನ ಒದಗಿಸಲಾಗಿದೆ. ಈ ಯೋಜನೆ ಪೂರ್ಣಗೊಂಡ ಬಳಿಕ ಕ್ಷೇತ್ರದ ಜನರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳು ಗಣನೀಯವಾಗಿ ಕಡಿಮೆಯಾಗಲಿವೆ.
