Clean Kodagu – Green Kodagu’ Message Emphasized at Siddapura Cleanliness Drive, 18/11/2026

ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಾರ್ಯಾಲಯ, ಸಿದ್ದಾಪುರ ಹಾಗೂ ಸ್ವಚ್ಛ ಸಿದ್ದಾಪುರ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಳಿಕ ಮಾತನಾಡುತ್ತಾ ‘ಶುದ್ಧ ಕೊಡಗು – ಹಸಿರು ಕೊಡಗು’ ಎಂಬ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲೂ ಸದಾ ಇರಬೇಕು. ನಾಡಿನ ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಿ, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಕೈಜೋಡಿಸಿದಾಗ ಕೊಡಗನ್ನು ಸುಂದರ ಹಾಗೂ ಸ್ವಚ್ಛ ನಾಡನ್ನಾಗಿ ರೂಪಿಸಲು ಸಾಧ್ಯವಾಗುತ್ತದೆ. ಬಾಲ್ಯದಿಂದಲೇ ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಹಿರಿಯರು ತಮ್ಮ ಮಕ್ಕಳಿಗೆ ಸ್ವಚ್ಛತೆಯ ಮಹತ್ವವನ್ನು ತಿಳಿಸಿಕೊಡಬೇಕು.