**Land Puja Held for New Bridge Construction at Kunnamakki to Improve Road Connectivity**, 18/11/2026
ವಿರಾಜಪೇಟೆ ತಾಲೂಕು ಕೆದಮುಳ್ಳೂರು ಭಾಗದ ಕುಂಞಮಕ್ಕಿ ಎಂಬಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಗೆ ನೂತನ ಸೇತುವೆ ನಿರ್ಮಿಸುವ ಕಾಮಗಾರಿಗೆ ಸರ್ಕಾರದ ವಿಶೇಷ ಅನುದಾನದಡಿ ಭೂಮಿಪೂಜೆಯನ್ನು ನೆರವೇರಿಸಲಾಯಿತು.
ವಿರಾಜಪೇಟೆ–ಬೊಯಿಕೇರಿ–ಕೊಟ್ಟೋಳಿ–ಪಾಲಂಗಾಲ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಈ ಲೋಕೋಪಯೋಗಿ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಜನರು ಸಂಚರಿಸುತ್ತಿದ್ದು, ಸುಗಮ ಹಾಗೂ ಸುರಕ್ಷಿತ ಸಂಚಾರದ ದೃಷ್ಟಿಯಿಂದ ಸೇತುವೆಯ ಅಗತ್ಯವನ್ನು ಮನಗಂಡು ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಮಗಾರಿ ಶೀಘ್ರವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದೆ.
