Second Edition of KAIH Hockey Cup Inaugurated at Gonikoppal; Event to Encourage Kodagu’s Hockey Talent, 18/11/2026

ಹಾಕಿ ಇಂಡಿಯಾ ಕೈಗ್ ಸ್ಪೋರ್ಟ್ಸ್ ಫೌಂಡೇಶನ್ ಹಾಗೂ ಕಾವೇರಿ ರಾಯಲ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ಗೋಣಿಕೊಪ್ಪಲುವಿನ ಕಾಲ್ಸ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿರುವ ಎರಡನೇ ಆವೃತ್ತಿಯ ಕೈಗ್ ಹಾಕಿ ಕಪ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡುತ್ತಾ ಕೊಡಗು ಜಿಲ್ಲೆ ಹಲವು ವೈಶಿಷ್ಟ್ಯತೆಗಳಿಗೆ ಹೆಸರುವಾಸಿಯಾಗಿದ್ದು, ಅವುಗಳಲ್ಲಿ ಹಾಕಿ ಕ್ರೀಡೆ ಪ್ರಮುಖವಾದುದು. ಕೊಡಗಿನ ಅನೇಕ ಹಾಕಿ ಪಟುಗಳು ದೇಶಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಲ್ಲಿನ ಕ್ರೀಡಾ ಪ್ರತಿಭೆಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಇಂತಹ ಕ್ರೀಡಾಕೂಟಗಳು ಹೆಚ್ಚಿನ ಪ್ರೋತ್ಸಾಹ ನೀಡಲಿವೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರರೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಹೆಸರು ಗಳಿಸಲಿ ಎಂದು ಶುಭ ಹಾರೈಸಿದೆ.