Commonwealth Law Education Association (CLEA) attended the International Conference at Shangrila Hotel in the city today: An agenda for India in 2047 with Hon'ble Chief Minister Shri Siddaramaiah on reshaping law, policy and innovation for fuel justice. A, 19/04/2026

ಕಾಮನ್‌ವೆಲ್ತ್ ಕಾನೂನು ಶಿಕ್ಷಣ ಸಂಘ (CLEA) ವತಿಯಿಂದ ಇಂದು ನಗರದ ಶಾಂಗ್ರಿಲಾ ಹೋಟೆಲ್ ನಲ್ಲಿ ಸುಸ್ಥಿರ ಶಕ್ತಿ: 2047 ರಲ್ಲಿ ಭಾರತಕ್ಕೆ ಒಂದು ಕಾರ್ಯಸೂಚಿ ಇಂಧನ ನ್ಯಾಯಕ್ಕಾಗಿ ಕಾನೂನು, ನೀತಿ ಮತ್ತು ನಾವೀನ್ಯತೆಯನ್ನು ಮರುರೂಪಿಸುವುದು ಕುರಿತು ಅಂತರರಾಷ್ಟ್ರೀಯ ಸಮ್ಮೇಳದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರೊಂದಿಗೆ ಭಾಗವಹಿಸಿದೆ.
ಈ ಸಮ್ಮೇಳದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಸೂರ್ಯ ಕಾಂತ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಮುಖ್ಯ ಸಲಹೆಗಾರರಾದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ವಿಭು ಬಖ್ರು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಡಿ.ಕೆ. ಸಿಂಗ್, ಭಾರತೀಯ ಕಾನೂನು ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಮತ್ತು ಸಮ್ಮೇಳನದ ಅಧ್ಯಕ್ಷರಾದ ಪ್ರೊ. ಡಾ. ಎಸ್. ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.