Fire-Affected Family in Karadigodu Receives Essential Supplies and Compensation Assurance, 19/10/2026
ವಿರಾಜಪೇಟೆ ತಾಲೂಕು ಸಿದ್ದಾಪುರ ಪಂಚಾಯತ್ ವ್ಯಾಪ್ತಿಯ ಕರಡಿಗೋಡು ಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಯಿಂದ ಮನೆ ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ ಮನೆಯ ಮಾಲೀಕ ಷಣ್ಮುಗಂ ಅವರಿಗೆ ಧೈರ್ಯ ತುಂಬಲಾಯಿತು.
ಬಳಿಕ ಘಟನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡು ಸಂಕಷ್ಟದಲ್ಲಿರುವ ಷಣ್ಮುಗಂ ಕುಟುಂಬಕ್ಕೆ ಮನೆಗೆ ಬೇಕಾಗುವ ಅಗತ್ಯ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಿ, ಅವರಿಗೆ ಸೂಕ್ತ ಪರಿಹಾರ ನೀಡುವ ಭರವಸೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಿದ್ದಾಪುರ ವಲಯ ಅಧ್ಯಕ್ಷರಾದ ಪ್ರತಿಷ್, ಪಕ್ಷದ ಮುಖಂಡರು ಸೂರಜ್ ಹೊಸೂರು, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮಾಜಿ ಪಂಚಾಯತಿ ಸದಸ್ಯರು ಕರುಪಯ್ಯ, ಮಿಲನ್ ರವರು ಉಪಸ್ಥಿತರಿದ್ದರು.
