A.S. Ponnanna Celebrates Children’s Day by Distributing Free School and Tiffin Bags to Students in Virajpet, 19/11/2026

ಮಕ್ಕಳ ಮುಖದಲ್ಲಿ ಸಂತಸದ ನಗು ಮೂಡಿಸುವುದೇ ಮಕ್ಕಳ ದಿನಾಚರಣೆಯ ಸಾರ್ಥಕತೆ…

ಮಕ್ಕಳ ದಿನಾಚರಣೆಯ ಅಂಗವಾಗಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗ, ವಿರಾಜಪೇಟೆ ಇವರ ವತಿಯಿಂದ ಆಯೋಜಿಸಲಾಗಿದ್ದ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಹಾಗೂ ಟಿಫನ್ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು, ಅವರಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದೆ.

ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ಅವರ ಕಲಿಕೆಗೆ ಪೂರಕವಾದ ಸೌಲಭ್ಯಗಳನ್ನು ಒದಗಿಸುವ ಇಂತಹ ಸಣ್ಣ ಪ್ರಯತ್ನಗಳು ಮಕ್ಕಳಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ತುಂಬಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮಕ್ಕಳೇ ದೇಶದ ಭವಿಷ್ಯ. ಅವರ ಶಿಕ್ಷಣ, ಸಂತೋಷ ಮತ್ತು ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಜವಾಬ್ದಾರಿ.