Janajatiya Gaurav Divas Celebrated at Titimati in Honour of Birsa Munda, 19/11/2026
ಬುಡಕಟ್ಟು ಸಮುದಾಯದ ಹೆಮ್ಮೆಯ ನಾಯಕ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ “ಜನಜಾತೀಯ ಗೌರವ ದಿವಸ್” ಆಚರಣೆ.
ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಆಯೋಜಿಸಲಾಗಿದ್ದ “ಜನಜಾತೀಯ ಗೌರವ ದಿವಸ್” ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಬ್ರಿಟಿಷರ ದಬ್ಬಾಳಿಕೆ, ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಧೈರ್ಯದಿಂದ ಹೋರಾಡಿ, ಬುಡಕಟ್ಟು ಸಮುದಾಯದ ಹಕ್ಕು, ಅಸ್ಮಿತೆ ಮತ್ತು ಸ್ವಾಭಿಮಾನದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಕ್ರಾಂತಿಕಾರಿ ಬಿರ್ಸಾ ಮುಂಡಾ ಅವರ ತ್ಯಾಗ ಮತ್ತು ಹೋರಾಟವನ್ನು ಸ್ಮರಿಸಲಾಯಿತು.
ಅವರ ಧೈರ್ಯ, ಹೋರಾಟದ ಮನೋಭಾವ ಹಾಗೂ ಸಾಮಾಜಿಕ ನ್ಯಾಯದ ಆದರ್ಶಗಳು ಇಂದಿಗೂ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿವೆ. ಇಂತಹ ಮಹಾನ್ ಚೇತನದ ಜೀವನಾದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಹಾಗೂ ಅವರ ಹೋರಾಟದ ಸಂದೇಶವನ್ನು ಜೀವಂತವಾಗಿರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಭಗವಾನ್ ಬಿರ್ಸಾ ಮುಂಡಾ ಅವರ ತ್ಯಾಗ, ಹೋರಾಟ ಮತ್ತು ಆದರ್ಶಗಳಿಗೆ ಶತಶತ ನಮನಗಳು.
