Pre-Launch Meeting Held for 2027 Kodava Hockey Festival Hosted by Grandmothers Family, 19/11/2026
2027ನೇ ಸಾಲಿನ ಕೊಡವ ಹಾಕಿ ಉತ್ಸವವನ್ನು ಈ ಬಾರಿ ಪ್ರತಿಷ್ಠಿತ ಅಜ್ಜಿಕುಟ್ಟಿರ ಕುಟುಂಬಸ್ಥರು ಆಯೋಜಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉತ್ಸವದ ಪೂರ್ವಭಾವಿ ಸಭೆಯು ನನ್ನ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಇದೇ ತಿಂಗಳ 22ರಂದು ಬೆಂಗಳೂರಿನ ಹಾಕಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿರುವ ಕೊಡವ ಹಾಕಿ ಉತ್ಸವದ ಲಾಂಛನ ಬಿಡುಗಡೆ ಸಮಾರಂಭದ ಪೂರ್ವಭಾವಿ ಸಿದ್ಧತೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮದ ಆಯೋಜನೆ ಹಾಗೂ ಲಾಂಛನ ಬಿಡುಗಡೆ ಸಮಾರಂಭವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಚರ್ಚಿಸಿ ಅಗತ್ಯ ಸಲಹೆಗಳನ್ನು ನೀಡಲಾಯಿತು.
