Bengaluru Kodava society's Haradasa Appaneravanda Appachcha Kavi Hall participated as chief guest and wished good luck in the sixth year Kgatnaad Kodava Sangha Bangalore's (Ottorme Koota) get-together program organized by Haradasa Appaneravanda Appaccha K, 20/07/2026
ಬೆಂಗಳೂರು ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಸಭಾಂಗಣದಲ್ಲಿ ಆಯೋಜಿಸಿದ ಆರನೇ ವರ್ಷದ ಕ್‌ಗ್ಗಟ್‌ನಾಡ್ ಕೊಡವ ಸಂಘ ಬೆಂಗಳೂರು ಇವರ (ಒತ್ತೋರ್ಮೆ ಕೂಟ) ಸಮ್ಮಿಲನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಕೋರಿದೆ.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಕ್‌ಗ್ಗಟ್‌ನಾಡ್ ಕೊಡವ ಸಂಘದ ಏಳಿಗೆಗೆ ಪ್ರತಿಯೊಬ್ಬ ಸದಸ್ಯನು ಶ್ರಮಿಸಬೇಕು. ಕ್‌ಗ್ಗಟ್‌ನಾಡ್ ಕೊಡವ ಸಂಘ ಹಾಗೂ ಅದರ ಸಂಘಟನೆ ಮತ್ತು ಆಚಾರ ವಿಚಾರ ಮತ್ತಷ್ಟು ಬೆಳೆಯಬೇಕೆಂದರೆ ಸಂಘಟನೆಯ ಹಾಗೂ ಸಮಾಜದ ಪ್ರತಿಯೊಬ್ಬರು ತಮ್ಮ ಕೊಡುಗೆಯನ್ನು ನೀಡಲೇಬೇಕು. ಆ ಮೂಲಕ ಕೊಡವ ಸಾಹಿತ್ಯ, ಸಂಸ್ಕೃತಿ ಮತ್ತು ಆಚರಣೆಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಲು ಪ್ರತಿಯೊಬ್ಬರೂ ಶ್ರಮಿಸಬೇಕು. ಇಂದಿನ ಆಧುನಿಕ ಜಗತ್ತಿನಲ್ಲಿ ನಮ್ಮ ಸಮುದಾಯದ ಯುವ ಪೀಳಿಗೆಗಳಿಗೆ ನಮ್ಮ ಸಂಸ್ಕೃತಿ ಹಾಗೂ ಆಚರಣೆಗಳ ವಿಷಯವನ್ನು ಮನದಟ್ಟು ಮಾಡುವುದು ಇಂದಿನ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಇಂತಹ ಸಮ್ಮಿಲನ ಕೂಟಗಳು ಹಾಗೂ ವಿಚಾರ ವಿನಿಮಯ ಅತ್ಯಂತ ಸಹಕಾರಿಯಾಗಲಿದೆ.
