73rd Cooperative Week Concludes in Madikeri; Cooperative Sector Achievers Honoured, 20/11/2026

ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ವಿವಿಧ ಸಹಕಾರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಕೊಡಗಿನ ಶ್ರೇಷ್ಠ ಸಹಕಾರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಬಳಿಕ ಮಾತನಾಡುತ್ತಾ ರೈತರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಸಹಕಾರ ಕ್ಷೇತ್ರದ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದ ಪ್ರಮುಖರು, ಗಣ್ಯರು ಹಾಗೂ ಗಣ್ಯ ಅತಿಥಿಗಳು ಉಪಸ್ಥಿತರಿದ್ದರು.