Party Leaders Urged to Strengthen Organisation and Ensure Effective Implementation of Development Works, 20/11/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ, ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ವಲಯ ಅಧ್ಯಕ್ಷರು ಮತ್ತು ಬೂತ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಕೆಯಾಗುವಂತೆ ನೋಡಿಕೊಳ್ಳುವುದರ ಜೊತೆಗೆ, ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಳ್ಳುವಲ್ಲಿ ಪಕ್ಷದ ಮುಖಂಡರು ವಿಶೇಷ ಮುತುವರ್ಜಿ ವಹಿಸಬೇಕೆಂದು ತಿಳಿಸಲಾಯಿತು.
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪಕ್ಷದಲ್ಲಿ ಜವಾಬ್ದಾರಿಯುತ ಹುದ್ದೆಗಳನ್ನು ಹೊಂದಿರುವ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಸರ್ಕಾರದ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಶ್ರಮಿಸಬೇಕು. ಜನಸಾಮಾನ್ಯರಿಗೆ ಅನುಕೂಲವಾಗುವ ಜನಪರ ಆಡಳಿತದ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಲಾಯಿತು.
