Robusta Rally 2026 Kicks Off at Ammathi Government High School Grounds, 20/11/2026

ವಿರಾಜಪೇಟೆ ತಾಲೂಕು ಅಮ್ಮತ್ತಿಯ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ರೋಬಸ್ಟ ರ್ಯಾಲಿ – 2026’ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ, ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಶ್ಲಾಘನೀಯ ಕಾರ್ಯವಾಗಿದೆ. ಇವು ಯುವಜನರಲ್ಲಿ ಕ್ರೀಡಾಸ್ಫೂರ್ತಿ, ದೈಹಿಕ ಸಾಮರ್ಥ್ಯ, ಶಿಸ್ತು ಹಾಗೂ ಪರಸ್ಪರ ಸಹಕಾರದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದ ಆಯೋಜಕರಾದ ಉದ್ದಪಂಡ ತಿಮ್ಮು ಬೋಪಣ್ಣ, ಕರ್ನಲ್ ಮಂಡೇಪಂಡ ಅಯ್ಯಪ್ಪ, ಮುಖಂಡರಾದ ಕುಂಡಚ್ಚಿರ ಮಂಜು ದೇವಯ್ಯ ಸೇರಿದಂತೆ ಹಲವು ಗಣ್ಯರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.