Inter-Kodava Societies Hockey Tournament Semi-Finals Begin at Balugodu, 21/11/2026

ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಬಾಳುಗೋಡಿನಲ್ಲಿ ಆಯೋಜಿಸಲಾಗಿರುವ ಅಂತರ ಕೊಡವ ಸಮಾಜಗಳ ಹಾಕಿ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯಕ್ಕೆ ಇಂದು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ, ಕ್ರೀಡೆಯು ಸಮಾಜದಲ್ಲಿ ಒಗ್ಗಟ್ಟು, ಸಹೋದರತ್ವ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಂತಹ ಕ್ರೀಡಾಕೂಟಗಳು ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿದ್ದು, ಕ್ರೀಡಾಪಟುಗಳು ಕ್ರೀಡಾಸ್ಫೂರ್ತಿಯಿಂದ ಪಂದ್ಯಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ಯಶಸ್ಸು ಸಾಧಿಸಲಿ ಎಂದು ಹಾರೈಸಲಾಯಿತು.