Over 63 Public Grievances Received; Officials Directed to Resolve Issues Promptly, 21/11/2026

ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿಯ ಹಾಲುಗುಂದ–ಕೊಂಡಂಗೇರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ PM Narendra Swamy ಅವರೊಂದಿಗೆ ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಲಾಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಜಾಸೇವಾ ಆಂದೋಲನದ ಮುಖ್ಯ ಉದ್ದೇಶ ಆಡಳಿತ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವುದಾಗಿದೆ. ಜನರು ತಮ್ಮ ಅಹವಾಲುಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಥಳೀಯ ಸಾರ್ವಜನಿಕರಿಂದ ಅಹವಾಲುಗಳು ಮತ್ತು ಮನವಿಗಳನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಒಟ್ಟು 63ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಬಹುತೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಉಳಿದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸುವ ಭರವಸೆ ನೀಡುವುದರ ಜೊತೆಗೆ, ಸ್ವೀಕರಿಸಿದ ಅರ್ಜಿಗಳ ಮೇಲೆ ಕೈಗೊಂಡ ಕ್ರಮಗಳ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜನರ ಬಳಿಗೆ ಸರ್ಕಾರ, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ – ಇದೇ ಪ್ರಜಾಸೇವಾ ಆಂದೋಲನದ ಮೂಲ ಆಶಯ.