**150-Year-Old Kodava Kolmand Renovated to Preserve Cultural Heritage in Madikeri**, 23/11/2026
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಸಮೀಪದಲ್ಲಿರುವ ಕೊಡವ ಸಮಾಜಕ್ಕೆ ಸೇರಿದ ಸುಮಾರು 150 ವರ್ಷಗಳಿಗೂ ಹೆಚ್ಚು ಇತಿಹಾಸ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಸಾಂಪ್ರದಾಯಿಕ ‘ಕೋಲ್ ಮಂದ್’ ನವೀಕರಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ, ಕೊಡವ ಸಮುದಾಯದ ಸಂಪ್ರದಾಯ, ಆಚರಣೆ, ಸಂಸ್ಕೃತಿ ಹಾಗೂ ಐತಿಹಾಸಿಕ ಪರಂಪರೆಯನ್ನು ಪ್ರತಿಬಿಂಬಿಸುವ ಇಂತಹ ಪಾರಂಪರಿಕ ತಾಣಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಇಂತಹ ಸಾಂಸ್ಕೃತಿಕ ಕೇಂದ್ರಗಳ ನವೀಕರಣ ಹಾಗೂ ಸಂರಕ್ಷಣಾ ಕಾರ್ಯಗಳು ಶ್ಲಾಘನೀಯ.
ಕೊಡಗಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಮಹತ್ವದ ಪಾತ್ರ ವಹಿಸಲಿದೆ.
