**27th Kodava Family Hockey Festival Inaugurated in Bengaluru by Deputy CM Dr. G. Parameshwara**, 23/11/2026

ಬೆಂಗಳೂರಿನ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆಯ ಕ್ರೀಡಾಂಗಣದಲ್ಲಿ ಕೊಡವ ಹಾಕಿ ಅಕಾಡೆಮಿಯ ಸಹಯೋಗ ಹಾಗೂ ಅಜ್ಜಿಕುಟ್ಟಿರ ಕುಟುಂಬದ ಆಶ್ರಯದಲ್ಲಿ ಆಯೋಜಿಸಲಾಗಿರುವ 27ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಅಧಿಕೃತ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲಾಯಿತು. ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕ್ರೀಡಾ ಸಚಿವರಾದ ಸನ್ಮಾನ್ಯ ಶ್ರೀ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ, ಕೊಡವ ಕೌಟುಂಬಿಕ ಹಾಕಿ ಉತ್ಸವವು ಕೊಡವ ಸಮುದಾಯದ ಒಗ್ಗಟ್ಟು, ಸಂಸ್ಕೃತಿ, ಕ್ರೀಡಾಭಿಮಾನ ಹಾಗೂ ಹಾಕಿ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿರುವ ಹೆಮ್ಮೆಯ ಕ್ರೀಡಾಕೂಟವಾಗಿದೆ. 27ನೇ ವರ್ಷದ ಉತ್ಸವವನ್ನು ಆಯೋಜಿಸುವ ಜವಾಬ್ದಾರಿ ಅಜ್ಜಿಕುಟ್ಟಿರ ಕುಟುಂಬಕ್ಕೆ ದೊರೆತಿರುವುದು ಸಂತಸದ ಸಂಗತಿ. ಕುಟುಂಬದ ಎಲ್ಲಾ ಸದಸ್ಯರು, ಕ್ರೀಡಾಭಿಮಾನಿಗಳು ಹಾಗೂ ಹಿತೈಷಿಗಳ ಸಹಕಾರದೊಂದಿಗೆ ಈ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿ, ಕೊಡವ ಹಾಕಿ ಉತ್ಸವದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡಲಾಗಿದೆ.
ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಅನ್ನು ಪೊನ್ನಂಪೇಟೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ₹3.5 ಕೋಟಿ ವೆಚ್ಚದ ಟರ್ಫ್ ಮೈದಾನದಲ್ಲಿ ಆಯೋಜಿಸುವ ಆಶಯವಿದ್ದು, ಈ ಮೂಲಕ ಹೊಸ ಇತಿಹಾಸ ಸೃಷ್ಟಿಸುವ ವಿಶ್ವಾಸವಿದೆ.
ಇದೇ ಸಂದರ್ಭದಲ್ಲಿ ಹಾಕಿ ಕ್ಷೇತ್ರದಲ್ಲಿ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದು ನಾಡಿನ ಕೀರ್ತಿಯನ್ನು ಹೆಚ್ಚಿಸಿದ ಪ್ರತಿಭಾವಂತ ಹಾಕಿಪಟುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾನ್ಯ ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನರೇಂದ್ರ ಸ್ವಾಮಿ, ಶಾಂತಿನಗರ ಕ್ಷೇತ್ರದ ಶಾಸಕರಾದ ಶ್ರೀ ಎನ್.ಎ. ಹ್ಯಾರಿಸ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಅಜ್ಜಿಕುಟ್ಟಿರ ಎಸ್. ಬೋಪಣ್ಣ, ಅಜ್ಜಿಕುಟ್ಟಿರ ಹಾಕಿ ಉತ್ಸವದ ಅಧ್ಯಕ್ಷರಾದ ನರೇನ್ ಎಸ್ ಕಾರ್ಯಪ್ಪ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷರಾದ ಪಾಂಡಂಡ ಬೋಪಣ್ಣ, ಅಜ್ಜಿಕುಟ್ಟಿರ ಕುಟುಂಬದ ಅಧ್ಯಕ್ಷರಾದ ಸಜನ್ ಚೆಂಗಪ್ಪ, ಸೇರಿದಂತೆ ಹಲವು ಗಣ್ಯರು, ಕ್ರೀಡಾ ಕ್ಷೇತ್ರದ ಪ್ರಮುಖರು, ಅಜ್ಜಿಕುಟ್ಟಿರ ಕುಟುಂಬದ ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.
ಕೊಡವ ಹಾಕಿ ಪರಂಪರೆಯ ಸಂಭ್ರಮಕ್ಕೆ ಮತ್ತೊಂದು ಹೊಸ ಅಧ್ಯಾಯ ಬರೆಯೋಣ! ????