**Bhoomi Pooja Held for Road Development Work at Katakeri Achchalwadi Ain Mane**, 23/11/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ವ್ಯಾಪ್ತಿಯ ಮದೆನಾಡು ಸಮೀಪದ ಕಾಟಕೇರಿ ಅಚ್ಚಲ್ವಾಡಿ ಐನ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಸ್ಥಳೀಯ ಕುಟುಂಬಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ರಸ್ತೆ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಒದಗಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಐನ್ ಮನೆಗೆ ತೆರಳುವ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.
ಕ್ಷೇತ್ರದ ಪ್ರತಿಯೊಂದು ಗ್ರಾಮೀಣ ಭಾಗದ ಜನರ ಅಗತ್ಯತೆಗಳಿಗೆ ಸ್ಪಂದಿಸಿ, ರಸ್ತೆ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಬದ್ಧತೆಯಿಂದ ಶ್ರಮಿಸಲಾಗುತ್ತಿದೆ.
