**Newly Developed Road at Netaji Layout in Madenadu Inaugurated**, 23/11/2026

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ವ್ಯಾಪ್ತಿಯ ಮದೆನಾಡು ಭಾಗದಲ್ಲಿರುವ ನೇತಾಜಿ ಬಡಾವಣೆಯ ನೂತನವಾಗಿ ಅಭಿವೃದ್ಧಿಪಡಿಸಲಾದ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದರ ಜೊತೆಗೆ, ಉತ್ತಮ ರಸ್ತೆ ಸಂಪರ್ಕ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಈ ಕಾಮಗಾರಿಯ ಮುಖ್ಯ ಉದ್ದೇಶವಾಗಿದೆ.
ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೂ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಜನರ ಅಗತ್ಯಗಳಿಗೆ ಸ್ಪಂದಿಸಿ ಹಂತ ಹಂತವಾಗಿ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ.