**Road Development Work Begins on Kedamullur–Kadanga Road in Virajpet**, 23/11/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು–ಕಡಂಗ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರೆತಿದ್ದು, ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಈ ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ಗ್ರಾಮಸ್ಥರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದ್ದು, ಸುಗಮ ಮತ್ತು ಸುರಕ್ಷಿತ ರಸ್ತೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ.
ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಮೂಲಸೌಕರ್ಯಗಳ ಸುಧಾರಣೆಗೆ ಆದ್ಯತೆ ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ.
