**Assembly Committee Submits Report to Strengthen KPSC Transparency and Prevent Irregularities**, 27/11/2026

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟುವ ಹಾಗೂ ಆಯೋಗದ ಕಾರ್ಯವೈಖರಿಯಲ್ಲಿ ಮತ್ತಷ್ಟು ಸುಧಾರಣೆ ಮತ್ತು ಪಾರದರ್ಶಕತೆಯನ್ನು ತರಲು ಅಗತ್ಯ ಕ್ರಮಗಳ ಕುರಿತು ಸೂಕ್ತ ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಇಂದು ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಎಸ್. ಪಾಟೀಲ್ ಅವರಿಗೆ ಸಲ್ಲಿಸಲಾಯಿತು.
ಶ್ರೀ ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಕರ್ನಾಟಕ ವಿಧಾನಸಭೆಯ ಸದನ ಸಮಿತಿಯು ಸಮಗ್ರವಾಗಿ ಪರಿಶೀಲಿಸಿ ಸಿದ್ಧಪಡಿಸಿದ ಈ ವರದಿಯು, ಕರ್ನಾಟಕ ಲೋಕಸೇವಾ ಆಯೋಗದ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ.
ಈ ಸಂದರ್ಭದಲ್ಲಿ ಶ್ರೀ ಸುರೇಶ್ ಕುಮಾರ್, ಶ್ರೀ ಅರಾಗ ಜ್ಞಾನೇಂದ್ರ, ಶ್ರೀಮತಿ ರೂಪ ಶಶಿಕಲಾ ಹಾಗೂ ವಿಧಾನಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.