The government has decided to completely reject the Kasturirangan report., 29/08/2026
ಮಾನವ- ವನ್ಯಜೀವಿ ಸಂಘರ್ಷ ಹಾಗೂ ಅರಣ್ಯ ವಿಷಯಗಳ ಕುರಿತು ಸಾರ್ವಜನಿಕರ ಜತೆ ಸಮಾಲೋಚನಾ ಸಭೆಯು ಮಡಿಕೇರಿಯ ಜಿಲ್ಲಾ ಅಧಿಕಾರಿ ಕಚೇರಿಯ ವಿಡಿಯೋ ಸಂವಾದ ಕೊಠಡಿಯಲ್ಲಿ ಮಾನ್ಯ ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿ ಅವರೊಂದಿಗೆ ಭಾಗವಹಿಸಿದೆ.
ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ಬಗ್ಗೆ ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಸುದೀರ್ಘವಾಗಿ ವಿಚಾರ ಮಂಡಿಸಿದ್ದು, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತೀರಸ್ಕರಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯಗಳ ವಿಶ್ವಾಸ ಪಡೆದು ವರದಿಯನ್ನು ಅನುಷ್ಠಾನ ಮಾಡಬೇಕು.
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಅವರು ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದ್ದು, ಈ ಸಂಬಂಧ ಸುದೀರ್ಘವಾಗಿ ಚರ್ಚಿಸಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಾಗುವುದು.
ಈ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಉಪಸ್ಥಿತರಿದ್ದರು.