Srimangala–Nalkeri Road Development Works to Begin Soon, 29/09/2026
ಪೊನ್ನಂಪೇಟೆ ತಾಲೂಕು ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಪ್ರತಿದಿನ ನೂರಾರು ಜನರು ಹಾಗೂ ವಾಹನಗಳು ಸಂಚರಿಸುವ ಈ ಭಾಗದ ರಸ್ತೆಯನ್ನು ಉತ್ತಮ ಗುಣಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಉತ್ತಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವುದು ನನ್ನ ಹಾಗೂ ಸರಕಾರದ ಉದ್ದೇಶ ಎಂದು ತಿಳಿಸಲಾಯಿತು. ಶೀಘ್ರದಲ್ಲೇ ಈ ಕಾಮಗಾರಿಗಳು ಪ್ರಾರಂಭವಾಗಲಿದ್ದು, ರಸ್ತೆ ನಿರ್ಮಾಣ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಉತ್ತಮ ರಸ್ತೆ ನಿರ್ಮಿಸುವಂತಹ ಆಗಬೇಕು ಎಂದು ಕರೆ ನೀಡಿದೆ.
