Virajpet Minority Leaders Seek Community Development Measures from U.T. Khader, 30/09/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಮುಖಂಡರುಗಳು, ಇಂದು ನನ್ನ ನೇತೃತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಯು.ಟಿ ಖಾದರ್ ಅವರನ್ನು ಭೇಟಿಯಾಗಿ ತಮ್ಮ ಹಲವು ಬೇಡಿಕೆಗಳ ಮನವಿಯನ್ನು ಸಲ್ಲಿಸಿದರು.
ಮನವಿಯನ್ನು ಪುರಸ್ಕರಿಸಿದ ಮಾನ್ಯ ಸಚಿವರು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಮುದಾಯದ ಅಗತ್ಯಕ್ಕೆ ಅನುಸಾರವಾಗಿ ಮನವಿಯನ್ನು ಪರಿಗಣಿಸುವುದರೊಂದಿಗೆ, ಅಲ್ಪಸಂಖ್ಯಾತ ಇಲಾಖೆಯಲ್ಲಿನ ಸಿಬ್ಬಂದಿಯ ಕೊರತೆಯ ಬಗ್ಗೆಯೂ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
