Tributes Paid to Freedom Fighter Subedar Appiah Gowda on Death Anniversary, 31/10/2026
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ವೀರ ಸೇನಾನಿ ಸುಬೇದಾರ್ ಅಪ್ಪಯ್ಯ ಗೌಡ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.
ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಸುಬೇದಾರ್ ಅಪ್ಪಯ್ಯ ಗೌಡ ಅವರು ದೇಶಕ್ಕೆ ಮತ್ತು ರಾಜ್ಯಕ್ಕೆ ನೀಡಿದ ಅಪ್ರತಿಮ ಕೊಡುಗೆ ಹಾಗೂ ಬಲಿದಾನವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
